ಅಂಕೋಲಾ: ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ಹಿಲ್ಲೂರು ಗ್ರಾಪಂ ವ್ಯಾಪ್ತಿಯ ರಾಜ್ಯ ಹೆದ್ದಾರಿಯಲ್ಲಿ ಬೃಹದಾಕಾರದಮರವೊಂದು ಅಡ್ಡಲಾಗಿ ಬಿದ್ದಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ.

ಹೌದು… ಕಳೆದ ಮೂರ್ನಾಲ್ಕು ದಿನಗಳಿಂದ ತಾಲೂಕಿನಾದ್ಯಂತ ಸುರಿಯುತ್ತಿರುವ ಬಾರಿ ಮಳೆಗೆ ತಗ್ಗು ಪ್ರದೇಶದ ಮನೆಗಳಿಗೆ ನೀರು ತುಂಬಿದೆ. ಅದರಂತೆಯೇ ಶುಕ್ರವಾರವು ಕೂಡ ವರುಣಾರ್ಭಟ ಮುಂದುವರೆದಿದ್ದು,ಕೆಲವೆಡೆ ಗಾಳಿ ಸಹಿತ ಮಳೆಯಾಗಿದೆ.

ಮಾಸ್ತಿಕಟ್ಟಾ ದಿಂದ ಮಾದನಗೇರಿ ಸಂಪರ್ಕಿಸುವ ರಾಜ್ಯ ಹೆದ್ದಾರಿ ಇದಾಗಿದ್ದು,ಸಂಚಾರ ಸಂಪೂರ್ಣ ಬಂದ್ ಆಗಿದ್ದು,ಬಾರಿ ವಾಹನಗಳು ತೆರಳದಂತೆ ಸೂಚನೆ ನೀಡಲಾಗಿದೆ.

ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಮರ ಉರುಳಿದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತಾಪಂ ಕಾರ್ಯನಿರ್ವಹಣಾಧಿಕಾರಿ ಸುನೀಲ್ ಎಂ ಭೇಟಿ ನೀಡಿ ಹೆದ್ದಾರಿ ಸಂಚಾರ ಮುಕ್ತ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.


Leave a Reply