ಕಾರವಾರ:ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಗೆ ಬಿಗ್ ಶಾಕ್ ಎದುರಾಗಿದ್ದು, 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಿ ಆದೇಶಿಸಲಾಗಿದೆ.

ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿಯಲ್ಲಿರುವ ಎಸ್ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅಂತರ ಕಾಯ್ದುಕೊಂಡಿದ್ದರು.
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಬ್ಬರು ಶಾಸಕರನ್ನು ಬಿಜೆಪಿ ಹೈಕಮಾಂಡ್ 6 ವರ್ಷ ಉಚ್ಚಾಟನೆ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎನ್ನುವುದು ಮಾತ್ರ ಗೊಂದಕ್ಕೆ ಎಡೆಮಾಡಿಕೊಟ್ಟಿದೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹಲವು ಬಾರಿ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಶಿವರಾಮ್ ಹೆಬ್ಬಾರ್ ವಿರುದ್ಧ ಹೈಕಮಾಂಡ್ ಗಮನಕ್ಕೆ ತಂದಿದ್ದರು,ಯಲ್ಲಾಪುರ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡರು ಅದರಿಂದ ಹೆಬ್ಬಾರ್ ದೂರ ಉಳಿದಿದ್ದರು. ಹೆಸರಿಗೆ ಮಾತ್ರ ಬಿಜೆಪಿಯಲ್ಲಿದ್ದ ಶಿವರಾಮ್ ಹೆಬ್ಬಾರ್ ಅವರನ್ನು ಇಂದು ಬಿಜೆಪಿ ಶಿಸ್ತುಕ್ರಮ ಕೈಗೊಂಡು ಆರು ವರ್ಷ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದೆ.

ಪೈಯರ್ ಬ್ರಾಂಡ್ ಅನಂತಕುಮಾರ್ ಹೆಗಡೆ ಹೆಸರು ಮುಂಚೂಣಿಯಲ್ಲಿ!
ಶಿವರಾಮ್ ಹೆಬ್ಬಾರ್ ಉಚ್ಛಾಟನೆಯಿಂದ ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರೆಂಬುದು ಮಾತ್ರ ಗೊಂದಲಕ್ಕೆ ಕಾರಣಾವಾಗಿದ್ದು, ಹಿಂದೂ ಪೈರ್ ಬ್ರಾಂಡ್ ಅನಂತಕುಮಾರ್ ಹೆಗಡೆ ಹೆಸರು ಕೇಳಿಬರುತ್ತಿದೆ. ಕಳೆದ ಕೆಲದಿನಗಳ ಹಿಂದೆಯಷ್ಟೇ ಮಾಜಿ ಸಂಸದ ಪ್ರತಾಪ್ ಸಿಂಹ ಅನಂತಕುಮಾರ್ ಹೆಗಡೆಯವರಿಗೆ ಸಕ್ರಿಯ ರಾಜಕಾರಣದಲ್ಲಿ ತೊಡಗಿಕೊಳ್ಳುವಂತೆ ಅಮಂತ್ರಿಸಿದ್ದರು ಆದ್ದರಿಂದ ರಾಜ್ಯ ರಾಜಕಾರಣದಲ್ಲಿ ಗುರುತಿಸಿಕೊಳ್ಳುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿದೆ ಎನ್ನಲಾಗಿದೆ.

ತನ್ನ ನೇರ ನುಡಿಯ ಮೂಲಕ ಹಿಂದುಗಳ ಪರ ನಿಲ್ಲುವ ಅನೇಕ ನಾಯಕರುಗಳ ಪೈಕಿ ಮೊದಲು ಹೆಸರು ಅನಂತಕುಮಾರ್ ಹೆಗಡೆಯವರದ್ದು, ಜಿಲ್ಲೆಯಾದ್ಯಂತ ಸಹಸ್ರಾರು ಅಭಿಮಾನಿಗಳನ್ನು ಹೊಂದಿರುವ ಹೆಗಡೆ ಯಲ್ಲಾಪುರ ಕ್ಷೇತ್ರಕ್ಕೆ ಬರಲಿ ಎನ್ನುವುದು ಯಲ್ಲಾಪುರ,ಮುಂಡಗೋಡ ಬಿಜೆಪಿಗರ ಆಶಯವಾಗಿದೆ. ಹಾಗೆಯೇ ಉತ್ತರ ಕನ್ನಡ ಜಿಲ್ಲೆಯ ಪ್ರಭಾವಿ ರಾಜಕಾರಣಿಯೋರ್ವರ ಪುತ್ರನ ಹೆಸರು ಕೇಳಿಬರುತ್ತಿದ್ದು, ಅದರಂತೆಯೇ ಪತ್ರಕರ್ತರಾದ ಹರಿಪ್ರಕಾಶ್ ಕೋಣೆಮನೆಯವರ ಹೆಸರು ಕೂಡ ಬಿಜೆಪಿ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಎನ್ನಲಾಗಿದೆ.


Leave a Reply