ಮುಂಡಗೋಡ : ಚಲಿಸುತ್ತಿದ ಟ್ರ್ಯಾಕ್ಟರ್ ಮೇಲಿಂದ ಬಿದ್ದು ಯುವಕ ಮೃತಪಟ್ಟ ಘಟನೆ ತಾಲೂಕಿನ ಇಂದೂರ ಗ್ರಾಮದ ಶಿಸನಾಳ ಶರೀಫ ದೇವಸ್ಥಾನದ ಸಮೀಪ ನಡೆದಿದೆ.

ತಾಲೂಕಿನ ನಂದಿಕಟ್ಟಾ ಗ್ರಾಮ ಪಂ. ವ್ಯಾಪ್ತಿಯ ಹುಲಿಹೊಂಡ ಗ್ರಾಮದ ಸತೀಶ ಮಂಜುನಾಥ ತಳವಾರ(18) ಎಂಬಾತನೆ ಸಾವನ್ನಪ್ಪಿದ ಯುವಕನಾಗಿದ್ದಾನೆ.

ಅರಣ್ಯ ಸಸಿ ಪಾಲನ ಕೇಂದ್ರ ದಿಂದ ಹುಲಿಹೊಂಡ ಗ್ರಾಮದ ಅರಣ್ಯ ಪ್ರದೇಶಕ್ಕೆ ಗಿಡಗಳನ್ನು ಸಾಗಿಸುವ ಸಂದರ್ಭದಲ್ಲಿ ಮಾರ್ಗ ಮಧ್ಯೆ ಈ ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಯುವಕನಿಗೆ ತಾಲೂಕಾ ಆಸ್ಪತ್ರೆಗೆ ದಾಖಲಿಸುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
ಮುಂಡಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,ಪ್ರಕರಣ ದಾಖಲಾಗಿದೆ.


Leave a Reply