Spread the love

ಕಾರವಾರ: ಮದ್ಯದ ಅಮಲಿನಲ್ಲಿ ಅತಿ ವೇಗವಾಗಿ ಕಂಟೇನರ್ ಚಲಾಯಿಸಿದ ಚಾಲಕನ ಬೇಜವಾಬ್ದಾರಿಗೆ ಐದು ವರ್ಷದ ಹಸುಗೂಸು ಬಲಿಯಾದ ದಾರುಣ ಘಟನೆ ಕಾರವಾರ ತಾಲೂಕಿನ ಬಿಣಗಾ ಘಟ್ಟದ ಬಳಿ ನಡೆದಿದೆ.

ಕಾರವಾರದಿಂದ ಅಂಕೋಲಾ ಕಡೆಗೆ ವೈದ್ಯ ದಂಪತಿಗಳು ತಮ್ಮ ಇಬ್ಬರು ಮಕ್ಕಳೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಇದೇ ವೇಳೆ ಎದುರಿನಿಂದ ಬರುತ್ತಿದ್ದ ಕ್ಯಾಂಟರ್ ಬಿಣಗಾ ಘಟ್ಟದ ತಿರುವಿನಲ್ಲಿ ನಿಯಂತ್ರಣ ತಪ್ಪಿ ನೇರವಾಗಿ ಕಾರಿನ ಮೇಲೆ ಪಲ್ಟಿಯಾಗಿದೆ. ಈ ಭೀಕರ ಅಪಘಾತದ ಪರಿಣಾಮವಾಗಿ ಕಾರಿನಲ್ಲಿದ್ದ ಐದು ವರ್ಷದ ಮಗು ಸ್ಥಳದಲ್ಲೇ ಕೊನೆಯುಸಿರೆಳೆದಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ವೈದ್ಯ ದಂಪತಿ ಹಾಗೂ ಮತ್ತೊಂದು ಮಗುವನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ಗಾಯಾಳುಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತಕ್ಕೆ ಕ್ಯಾಂಟರ್ ಚಾಲಕನ ಅತಿಯಾದ ಮದ್ಯಪಾನವೇ ಕಾರಣ ಎನ್ನಲಾಗಿದೆ. ಘಟನೆಯ ನಂತರ ಚಾಲಕನನ್ನು ಗಮನಿಸಿದಾಗ ಆತ ಮಾತನಾಡಲು ಸಾಧ್ಯವಾಗದಷ್ಟು ಎಣ್ಣೆ ಮತ್ತಿನಲ್ಲಿದ್ದದ್ದು ಕಂಡುಬಂದಿದೆ. ಸಾರ್ವಜನಿಕರು ಚಾಲಕನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *