Spread the love

ಶಿರಸಿ: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃ*ತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಅಜ್ಜೀಬಳ ಸಮೀಪ ಶುಕ್ರವಾರ ರಾತ್ರಿ ನಡೆದಿದೆ.

ಅಪಘಾತದಲ್ಲಿ ಸಿದ್ದಾಪುರ ತಾಲೂಕಿನ ಮುತ್ತಳ್ಳಿ ಗ್ರಾಮದ ನಿವಾಸಿ ಸಿಂದೂರ ಹೆಗಡೆ (21) ಸ್ಥಳದಲ್ಲೇ ಮೃ*ತಪಟ್ಟಿದ್ದಾರೆ. ಇದೇ ತಾಲೂಕಿನ ಗಿರೀಶ ಹಾಗೂ ಚಿತ್ರಾ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸಿಂದೂರ ಹೆಗಡೆ ಸ್ಥಳದಲ್ಲೇ ಮೃ*ತಪಟ್ಟಿದ್ದಾರೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿರುವುದಾಗಿ ಮೂಲಗಳು ತಿಳಿಸಿವೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಶಿರಸಿ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃ*ತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *