ತಿಥಿ ಕಾರ್ಯಮುಗಿಸಿ ಮನೆಗೆ ತೆರಳುತ್ತಿದ್ದ ಕಾರು ಪಲ್ಟಿ;ಓರ್ವ ಸಾವು

Spread the love

ಅಂಕೋಲಾ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ರ ಕಂಚಿನಬಾಗಿಲು ಬಳಿ ಕಾರೊಂದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ ಓರ್ವ ಸಾವನ್ನಪ್ಪಿದ್ದು,ಉಳಿದವರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ.

ಹೌದು…   ಕಾರವಾರದ ಸಂಬಂಧಿಕರ ಮನೆಯಲ್ಲಿ ತಿಥಿ ಕಾರ್ಯ ಮುಗಿಸಿ KA25MA 2308 ನಂಬರಿನ ಮಾರುತಿ ಸುಜುಕಿ ಆಲ್ಟೋ ಕಾರಿನಲ್ಲಿ ನಾಲ್ವರು ಕುಟುಂಬಸ್ಥರು ಹುಬ್ಬಳ್ಳಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ 63 ರ ಕಂಚಿನಬಾಗಿಲು ಬಳಿಯ ತಿರುವಿನಲ್ಲಿ ರಸ್ತೆಗೆ ಅಡ್ಡಬಂದ ಆಕಳನ್ನು ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಬದಿಯಲ್ಲಿ ಪಲ್ಟಿಯಾಗಿದ್ದು ಕಾರಿನಲ್ಲಿದ್ದ ನಾಲ್ವರ ಪೈಕಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು,ಉಳಿದ ಮೂವರನ್ನು ಅಂಕೋಲಾ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಬಾರದ ಆಂಬ್ಯುಲೆನ್ಸ್ ಹಾರಿಹೋದ ಪ್ರಾಣ.

ಅಪಘಾತ ಸಂಭವಿಸುತ್ತಲೇ ಅಲ್ಲಿಯೇ ಇದ್ದ ಸ್ಥಳೀಯರು ನೆರವಿಗೆ ಬಂದು ಕಾರಿನಲ್ಲಿದ್ದವರ ರಕ್ಷಣೆಗೆ ಮುಂದಾಗಿದ್ದರು ಹಾಗೆಯೇ ಸ್ಥಳೀಯನೊರ್ವ ಆಂಬ್ಯುಲೆನ್ಸ್ ಗೆ ಕರೆ ಮಾಡಿದರು ಸಹ 1 ಗಂಟೆ ತಡವಾಗಿ ಬಂದಿದ್ದರಿಂದ ಗಾಯಾಳುವಿನ ಪ್ರಾಣಪಕ್ಷಿ ಹಾರಿಹೋಗಿದ್ದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *