ಅಂಕೋಲಾ: ಅಯೋಧ್ಯ ರಾಮಲಲ್ಲಾ ‘ಪ್ರಾಣ ಪ್ರತಿಷ್ಠೆ’ಗೆ ಒಂದು ವರ್ಷ ಪೂರೈಸಿದ ಹಿನ್ನೆಲೆ ತಾಲೂಕಿನ ಗ್ರಾಮದೇವಿ ಶಾಂತಾದುರ್ಗಾ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ಆಚರಿಸಲಾಯಿತು.

ಹೌದು….ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ಬಾಲರಾಮನ ವಿಗ್ರಹದ ಐತಿಹಾಸಿಕ ‘ಪ್ರಾಣ ಪ್ರತಿಷ್ಠೆ’ ಸಮಾರಂಭಕ್ಕೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತಾಲೂಕಿನ ಗ್ರಾಮದೇವಿ ಶಾಂತಾದುರ್ಗಾ ದೇವಸ್ಥಾನದಲ್ಲಿ ಭಕ್ತಾದಿಗಳು ನೂರಾರು ಸಂಖ್ಯೆಯಲ್ಲಿ ಆಗಮಿಸಿ ರಾಮನಾಮಗಳನ್ನು ಜಪಿಸಿ ದೀಪಗಳನ್ನು ಹಚ್ಚಿ ಲಕ್ಷದೀಪೋತ್ಸವ ಆಚರಿಸಿ ಪುನೀತರಾದರು.

ದೇವಸ್ಥಾನದಲ್ಲಿ ಮಹಿಳೆಯರಿಂದ ರಾಮನಾಮಗಳ ಪಠಣ ಹಾಗೂ ಬಜನೆಗಳು ನೆರವೇರಿದ್ದವು ನಂತರ ಶಾಂತಾದುರ್ಗಾ ದೇವಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ,ಪ್ರಸಾದದೊಂದಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಈ ಸಂದರ್ಭದಲ್ಲಿ ಇಪ್ಪತ್ತೈದಕ್ಕೂ ಹೆಚ್ಚಿನ ಸ್ವಯಂ ಸೇವಕರು ದೀಪೋತ್ಸವಕ್ಕೆ ಸಹಕರಿಸಿ ದೇವರ ಕೃಪೆಗೆ ಪಾತ್ರರಾದರು.


Leave a Reply