Spread the love

ಕಾರವಾರ: ಸಾರ್ವಜನಿಕರಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಯೊಬ್ಬರು ಅಕ್ಷಮ್ಯ ಅಪರಾಧವೆಸಗಿ ಕಂಬಿ ಎಣಿಸುತ್ತಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಯಲ್ಲಾಪುರ ಮೂಲದ ಅಪ್ರಾಪ್ತ ಬಾಲಕಿಯ ಮೇಲೆ ಲೈಂ*ಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಭಟ್ಕಳ ತಾಲ್ಲೂಕಿನ ಮಂಕಿ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ (PSI) ಅಭಿನಂದನ್ ಅವರನ್ನು ಭಟ್ಕಳ ಪೊಲೀಸರು ಬಂಧಿಸಿದ್ದಾರೆ.

ಭಟ್ಕಳ ನಗರ ಠಾಣೆಯಲ್ಲಿ ದೂರು ದಾಖಲು

ಲೈಂ*ಗಿಕ ಕಿರುಕುಳಕ್ಕೊಳಗಾದ ಅಪ್ರಾಪ್ತ ಬಾಲಕಿಯು ಭಟ್ಕಳ ನಗರ ಪೊಲೀಸ್ ಠಾಣೆಗೆ ತೆರಳಿ ಆರೋಪಿ ಪಿಎಸ್‌ಐ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದಳು. ಅಪ್ರಾಪ್ತೆಯ ದೂರಿನ ಅನ್ವಯ ಪೋಕ್ಸೋ (POCSO) ಕಾಯ್ದೆಯಡಿ ಗಂಭೀರ ಪ್ರಕರಣ ದಾಖಲಿಸಿಕೊಂಡ ಭಟ್ಕಳ ನಗರ ಠಾಣೆಯ ಪೊಲೀಸರು, ತಕ್ಷಣವೇ ಕಾರ್ಯಾಚರಣೆ ನಡೆಸಿ ಆರೋಪಿ ಪಿಎಸ್‌ಐ ಅಭಿನಂದನ್ ಅವರನ್ನು ವಶಕ್ಕೆ ಪಡೆದಿದ್ದಾರೆ. 

ಸದ್ಯ ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳು ಜಾರಿಯಲ್ಲಿವೆ. ರಕ್ಷಕರೇ ಭಕ್ಷಕರಾಗಿರುವ ಈ ಘಟನೆಯು ಪೊಲೀಸ್ ಇಲಾಖೆಗೆ ತೀವ್ರ ಮುಜುಗರ ತಂದಿದೆ.

Leave a Reply

Your email address will not be published. Required fields are marked *