Spread the love

ಕುಮಟಾ: ತಾಲೂಕಿನ ಮಿರ್ಜಾನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು, ಹೆದ್ದಾರಿ ಪಕ್ಕದಲ್ಲಿದ್ದ ಅಂಗಡಿಗೆ ನುಗ್ಗಿದ ಘಟನೆ ನಡೆದಿದೆ.

ಅಂಕೋಲಾ ಕಡೆಯಿಂದ ಕುಮಟಾ ಕಡೆಗೆ ಚಲಿಸುತ್ತಿದ್ದ ವೇಳೆ ಲಾರಿ ಏಕಾಏಕಿ ನಿಯಂತ್ರಣ ಕಳೆದುಕೊಂಡಿದೆ. ಮೊದಲು ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದ ಲಾರಿ, ಬಳಿಕ ಪಕ್ಕದಲ್ಲಿದ್ದ ಅಂಗಡಿಗೆ ಗುದ್ದಿದೆ. ಲಾರಿ ಗುದ್ದಿದ ರಭಸಕ್ಕೆ ಅಂಗಡಿ ಸಂಪೂರ್ಣವಾಗಿ ಜಖಂಗೊಂಡಿದೆ. ಅದೃಷ್ಟವಶಾತ್, ಘಟನೆಯು ಬೆಳಗಿನ ಜಾವ ಸಂಭವಿಸಿದ್ದರಿಂದ ಅಂಗಡಿ ಮುಚ್ಚಿತ್ತು. ಹಗಲಿನ ವೇಳೆ ಈ ಅಪಘಾತ ಸಂಭವಿಸಿ, ಅಂಗಡಿಯಲ್ಲಿ ಜನರಿದ್ದಿದ್ದರೆ ಭಾರಿ ಪ್ರಾಣಾಪಾಯವೇ ಉಂಟಾಗುವ ಸಾಧ್ಯತೆಯಿತ್ತು.

ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಘಟನೆಗೆ ನಿಖರ ಕಾರಣವೇನು ಹಾಗೂ ಜಖಂಗೊಂಡಿರುವ ಅಂಗಡಿಯ ಒಟ್ಟು ಹಾನಿಯ ಪ್ರಮಾಣ ಎಷ್ಟು ಎಂಬುದರ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *