Spread the love

ಹೊನ್ನಾವರ: ತಾಲೂಕಿನ ಕವಲಕ್ಕಿ ಗ್ರಾಮದ ಬಳಿಯ ಸಾಗರ-ಹೊನ್ನಾವರ ರಸ್ತೆಯಲ್ಲಿ ಟೆಂಪೋವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಸಾ*ವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಹಾಡಿನಗೇರಿ (Hadinageri) ಮೂಲದ ಮಾರುತಿ ನಾಯ್ಕ ಮೃ*ತ ದುರ್ದೈವಿ.

ಅಜಾಗರೂಕ ಚಾಲನೆಯಿಂದ ಅವಘಡ: 

ಸಾಗರ ಕಡೆಯಿಂದ ಹೊನ್ನಾವರದತ್ತ ಬರುತ್ತಿದ್ದ ಟೆಂಪೋವನ್ನು ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದಿದ್ದೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಕವಲಕ್ಕಿ ಬಳಿ ಏಕಾಏಕಿ ಸ್ಕೂಟಿಗೆ ಡಿಕ್ಕಿ ಹೊಡೆದ ಟೆಂಪೋ, ಡಿಕ್ಕಿಯ ರಭಸಕ್ಕೆ ರಸ್ತೆಯಲ್ಲೇ ಪಲ್ಟಿಯಾಗಿದೆ.

ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾ*ವು: 

ಘಟನೆಯಲ್ಲಿ ಸ್ಕೂಟಿ ಸವಾರ ಮಾರುತಿ ನಾಯ್ಕ ಅವರಿಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣವೇ ಅವರನ್ನು ರಕ್ಷಿಸಿ ಚಿಕಿತ್ಸೆಗಾಗಿ ಹೊನ್ನಾವರ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ತೀವ್ರ ರಕ್ತಸ್ರಾವವಾಗಿದ್ದರಿಂದ ಅವರು ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಪಲ್ಟಿಯಾದ ಟೆಂಪೋದ ಚಾಲಕನಿಗೂ ಅಲ್ಪಸ್ವಲ್ಪ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಘಟನೆಗೆ ಸಂಬಂಧಿಸಿದಂತೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಾಹನಗಳನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *