Month: October 2026

ದನದ ಕೊಟ್ಟಿಗೆಗೆ ನುಗ್ಗಿ ಕರುವನ್ನು ಬಲಿಪಡೆದ ಚಿರತೆ; ಆತಂಕದಲ್ಲಿ ಎಡ್ತಾರೆ ಗ್ರಾಮಸ್ಥರು!

ಉತ್ತರ ಕನ್ನಡ ಜಿಲ್ಲೆಯ ಎಡ್ತಾರೆ ಗ್ರಾಮದಲ್ಲಿ ಆಹಾರ ಅರಸಿ ಬಂದ ಚಿರತೆಯೊಂದು ಕೊಟ್ಟಿಗೆಗೆ ನುಗ್ಗಿ ಕರುವನ್ನು ಕೊಂದು ಹಾಕಿದೆ. ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ಆಗ್ರಹಿಸಿದ್ದಾರೆ.

ಅಸ್ನೋಟಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕನ 1.48 ಲಕ್ಷ ರೂ. ಮೌಲ್ಯದ ವಸ್ತುಗಳ ಕಳ್ಳತನ

ಕಾರವಾರ ತಾಲೂಕಿನ ರೈಲ್ವೆ ನಿಲ್ದಾಣದಲ್ಲಿ ರೈಲು ನಿಂತಿದ್ದ ವೇಳೆ ಪ್ರಯಾಣಿಕನ 1.48 ಲಕ್ಷ ರೂ. ಮೌಲ್ಯದ ವಸ್ತುಗಳಿದ್ದ ಬ್ಯಾಗ್‌ ಅನ್ನು ದುಷ್ಕರ್ಮಿಗಳು ಕದ್ದೊಯ್ದಿದ್ದಾರೆ. ಗೋವಾದಲ್ಲಿ ಝೀರೋ ಎಫ್‌ಐಆರ್ ದಾಖಲಾದ ಬಳಿಕ ಪ್ರಕರಣ ಇದೀಗ ಕಾರವಾರದ ಚಿತ್ತಾಕುಲ ಠಾಣೆಗೆ ವರ್ಗಾವಣೆಯಾಗಿದೆ.

KAIGA ಯೋಜನೆಗೆ ಭಾರಿ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತದ ಗ್ರೀನ್ ಸಿಗ್ನಲ್; 15 ಮೆ.ಟನ್ ಭಾರಮಿತಿ ಪಾಲನೆಗೆ NPCIL ಕ್ರಮ

ಕೈಗಾ ಅಣು ವಿದ್ಯುತ್ ಯೋಜನೆಯ 5 ಮತ್ತು 6ನೇ ಘಟಕಗಳ ಕಾಮಗಾರಿ ಹಿನ್ನೆಲೆಯಲ್ಲಿ ಕೈಗಾ-ಕಾರವಾರ ರಾಜ್ಯ ಹೆದ್ದಾರಿ 06ರಲ್ಲಿ ಭಾರಿ ವಾಹನಗಳ ಸಂಚಾರದ ಮೇಲಿದ್ದ ನಿರ್ಬಂಧವನ್ನು ಜಿಲ್ಲಾಧಿಕಾರಿಗಳು ತೆರವುಗೊಳಿಸಿದ್ದಾರೆ. ಆದರೆ, ಪ್ರತಿ ಆಕ್ಸಲ್‌ಗೆ ಗರಿಷ್ಠ 15 ಮೆಟ್ರಿಕ್ ಟನ್ ಭಾರ ಸಾಗಣೆಗೆ…

ಹಳಗಾ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ‘ಅಷ್ಟಮಂಗಲ ಪ್ರಶ್ನೆ’

ಕಾರವಾರ ತಾಲೂಕಿನ ಹಳಗಾ ಗ್ರಾಮದ 400 ವರ್ಷಗಳ ಇತಿಹಾಸವುಳ್ಳ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಮೊದಲ ಬಾರಿಗೆ ಅಷ್ಟಮಂಗಲ ಪ್ರಶ್ನೆ ಕಾರ್ಯಕ್ರಮ ಜರುಗಿತು. ದೇವಾಲಯದ ಪೂಜಾ ಪದ್ಧತಿ, ಪರಂಪರೆ ಹಾಗೂ ಲೋಪದೋಷಗಳ ಕುರಿತು ಜ್ಯೋತಿಷಿಗಳಿಂದ ಮಾರ್ಗದರ್ಶನ ಪಡೆಯಲಾಯಿತು.

ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಉತ್ತರಕನ್ನಡ ಸೇರಿ ಮತಕ್ಷೇತ್ರದಲ್ಲಿ ಶೇ.75.62ರಷ್ಟು ಶಾಂತಿಯುತ ಮತದಾನ

ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟು ಶೇ. 75.62 ರಷ್ಟು ಮತದಾನ ದಾಖಲಾಗಿದೆ. ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ ಶೇ. 78.71 ರಷ್ಟು ಪದವೀಧರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಅತಿವೇಗದಿಂದ ಬಂದು ಬೈಕ್‌ಗೆ ಡಿಕ್ಕಿ; ಈರ್ವರಿಗೆ ಗಾಯ, ಸವಾರನ ವಿರುದ್ಧ ಪ್ರಕರಣ

ಮಲ್ಲಾಪುರ ಸಮೀಪದ ಗುನಗಿವಾಡಾ ಕ್ರಾಸ್ ಬಳಿ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಬೈಕ್ ಚಲಾಯಿಸಿಕೊಂಡು ಬಂದು ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆಸಿದ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ಅಪಘಾತವೆಸಗಿದ ಸವಾರನ ವಿರುದ್ಧ ಮಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೆಂಕಣಕೇರಿ ಪ್ರಾಥಮಿಕ ಶಾಲೆಯಲ್ಲಿ ಅಗ್ನಿ ಅವಘಡ; ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ!

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ತೆಂಕಣಕೇರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾತ್ರಿ ವೇಳೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಪಶ್ಚಿಮ ಪದವೀಧರ ಕ್ಷೇತ್ರ: ಮೋಹನ ಲಿಂಬಿಕಾಯಿ ಗೆಲುವಿಗೆ ‘ಅಹಿಂದ’ ರಣತಂತ್ರ, ಕುಬೇರಪ್ಪರಿಂದ ಬಿರುಸಿನ ಪ್ರಚಾರ

ಪಶ್ಚಿಮ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಪರ ಅಹಿಂದ ಮುಖಂಡರು ಪ್ರಚಾರ ತೀವ್ರಗೊಳಿಸಿದ್ದಾರೆ. ಡಾ. ಆರ್.ಎಂ. ಕುಬೇರಪ್ಪ ನೇತೃತ್ವದಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಮನೆ-ಮನೆ ಮತಯಾಚನೆ ನಡೆಯುತ್ತಿದೆ.