Spread the love

ಕಾರವಾರ: ಕಾರವಾರದ ಯೋಜನಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೋಮಾ ಹಾಗೂ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಖಾಸಗಿ ಕಂಪನಿಯ ಹುದ್ದೆಗಳಿಗೆ ಸೆಪ್ಟೆಂಬರ್ 9 ರಂದು ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಪ್ರತಿಷ್ಠಿತ ಖಾಸಗಿ ಕಂಪನಿಯಾದ ಮೈಟೈಲ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಈ ನೇರ ಸಂದರ್ಶನವನ್ನು (Walk-in Interview) ನಡೆಯಲಿದೆ.

ಕಾರವಾರದ ಸಿವಿಲ್ ಕೋರ್ಟ್ ರಸ್ತೆಯಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹತ್ತಿರದ ಶ್ರೀಮತಿ ಪ್ರೇಮಾಬಾಯಿ ರಾಯ್ಕರ್ ಬಿಲ್ಡಿಂಗ್‌ನಲ್ಲಿರುವ ಯೋಜನಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಈ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. 

ಈ ಹುದ್ದೆಗಳಿಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಇಬ್ಬರೂ ಭಾಗವಹಿಸಲು ಸಮಾನ ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಅರ್ಹ ಹಾಗೂ ಆಸಕ್ತ ಉದ್ಯೋಗಾಕಾಂಕ್ಷಿಗಳು ತಮ್ಮ ರೆಸ್ಯೂಮ್ (ಸ್ವವಿವರಗಳ ಪ್ರತಿ) ಜೊತೆಗೆ ಖುದ್ದಾಗಿ ಸಂದರ್ಶನದಲ್ಲಿ ಭಾಗವಹಿಸಬೇಕು.

ನೇರ ಸಂದರ್ಶನಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಹಾಗೂ ಮಾರ್ಗದರ್ಶನಕ್ಕಾಗಿ ಅಭ್ಯರ್ಥಿಗಳು ಯೋಜನಾ ಉದ್ಯೋಗ ವಿನಿಮಯ ಕಚೇರಿಗೆ ನೇರವಾಗಿ ಭೇಟಿ ನೀಡಬಹುದು. ಅಥವಾ ಕಚೇರಿಯ ಮೊಬೈಲ್ ಸಂಖ್ಯೆ 8310044796 ಹಾಗೂ ದೂರವಾಣಿ ಸಂಖ್ಯೆ 08382-226386 ಅನ್ನು ಸಂಪರ್ಕಿಸಬಹುದು ಎಂದು ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *