Spread the love

ಜೋಯಿಡಾ: ತಾಲೂಕಿನ ಜಗಲ್‌ಬೇಟ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಮತ್ತು ಬೈಕ್ ನಡುವೆ ಉಂಟಾದ ಡಿಕ್ಕಿಯಲ್ಲಿ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ದಾಂಡೇಲಿಯಿಂದ ರಾಮನಗರ ಕಡೆಗೆ ಬರುತ್ತಿದ್ದ ಬಸ್‌ಗೆ ಎದುರಿನಿಂದ ಬರುತ್ತಿದ್ದ ಬೈಕ್ ರಭಸವಾಗಿ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಮಹಾರಾಷ್ಟ್ರದ ಕೊಲ್ಹಾಪುರ ಮೂಲದ ಯುವಕನಾಗಿದ್ದು, ಆತ ಗೋಕರ್ಣಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ರಸ್ತೆಗೆ ಬಿದ್ದ ಯುವಕನ ಕಾಲಿನ ಮೇಲೆಯೇ ಬಸ್ ಹರಿದ ಪರಿಣಾಮ ಆತನ ಕಾಲಿಗೆ ಗಂಭೀರ ಸ್ವರೂಪದ ಪೆಟ್ಟಾಗಿದೆ.

ಅಪಘಾತದ ತಕ್ಷಣವೇ ಗಾಯಾಳು ಯುವಕನನ್ನು ರಕ್ಷಿಸಿ ಸ್ಥಳೀಯ ರಾಮನಗರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ. ಗಾಯದ ಸ್ವರೂಪ ಗಂಭೀರವಾಗಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಕೂಡಲೇ ಬೆಳಗಾವಿಯ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ರಾಮನಗರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *