ಬೆಂಗಳೂರು: ಕೊರೋನಾ ಮಹಾಮಾರಿ ಇದೀಗ ಮತ್ತೆ ಎಂಟ್ರಿ ಕೊಟ್ಟಿದ್ದು ದೇಶಾದ್ಯಂತ ಜನರ ನಿದ್ದೆಗೇಡಿಸಿದೆ. ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದ್ದು, ಬೆಂಗಳೂರಿನಲ್ಲಿ ಯುವಕನೋರ್ವ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ.

ಹೌದು ರಾಜ್ಯದಲ್ಲಿ ಇದೀಗ ಕೋವಿಡ್ ಆಕ್ಟಿವ್ ಪ್ರಕರಣಗಳ ಸಂಖ್ಯೆ 38ಕ್ಕೆ ಏರಿಕೆಯಾಗಿದ್ದು ಬೆಂಗಳೂರಿನಲ್ಲಿ ಒಂದೇ ಕಡೆ ಕೋವಿಡ್ ಆಕ್ಟಿವ್ ಪ್ರಕರಣಗಳ ಸಂಖ್ಯೆ 32 ಇವೆ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತ್ತೊಂದು ಹೊಸ ಕೇಸ್ ಪತ್ತೆಯಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆಯಿಂದ ಕೋವಿಡ್ ಟೆಸ್ಟ್ ಮಾಡಲು ನಿರ್ಧರಿಸಲಾಗಿದೆ.

ರಾಜ್ಯದ ಮೆಡಿಕಲ್ ಕಾಲೇಜು ಆಸ್ಪತ್ರೆ, ಜಿಲ್ಲಾಸ್ಪತ್ರೆಗಳಲ್ಲಿ ಕೊರೊನಾ ಟೆಸ್ಟ್ ಮಾಡಲು ನಿರ್ಧರಿಸಲಾಗಿದೆ. ಈ ಮೂಲಕ ರಾಜ್ಯದಲ್ಲಿ ಮತ್ತೆ ಕೋವಿಡ್ ಟೆಸ್ಟ್ ಲ್ಯಾಬ್ ಓಪನ್ ಮಾಡಲು ಸಿದ್ಧತೆ ನಡೆಸಲಾಗಿದೆ.


Leave a Reply