ಶಿರಸಿ ನಗರಸಭೆಗೆ ಶಾಸಕ ಭೀಮಣ್ಣ ನಾಯ್ಕ ದಿಢೀರ್ ಭೇಟಿ: ಏಜೆಂಟರ ಹಾವಳಿಗೆ ಬ್ರೇಕ್ ಹಾಕಲು ಸೂಚನೆ
ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರು ಶಿರಸಿ ನಗರಸಭೆಗೆ ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದರು. ಸಾರ್ವಜನಿಕರ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡುವಂತೆ ಹಾಗೂ ಮಧ್ಯವರ್ತಿಗಳ ಹಾವಳಿಗೆ ಬ್ರೇಕ್ ಹಾಕುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
