ಸರಕಾರಿ ಹಾಗೂ ಖಾಸಗಿ ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ;ಹಲವರಿಗೆ ಗಂಭೀರ ಗಾಯ!

Spread the love

ಮುಂಡಗೋಡ :  ವಿಜಯಾನಂದ ಟ್ರಾವೇಲ್ಸ್ ಹಾಗೂ ಕೆಎಸ್ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್ಸಿನಲ್ಲಿದ್ದ 25-30 ಜನರಿಗೆ ಗಂಭೀರ ಗಾಯಗಳಾದ ಘಟನೆ ಮುಂಡಗೋಡದ ನಂದೀಪುರ ಗ್ರಾಮದಲ್ಲಿ ನಡೆದಿದೆ.

              ಶಿರಸಿ-ಹುಬ್ಬಳ್ಳಿ ಮಾರ್ಗದಲ್ಲಿರುವ ಕಾತೂರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದೀಪುರ ಗ್ರಾಮದ ಸಮೀಪ ಈ ಘಟನೆ ಸಂಭವಿಸಿದೆ. ವಿಜಯಾನಂದ ಟ್ರಾವೇಲ್ಸ್ ಬಸ್ ಮುಂಡಗೋಡ ಕಡೆಯಿಂದ ಶಿರಸಿ ಕಡೆಗೆ ಬರುತ್ತಿದು, ಕೆಎಸ್ಆರ್‌ಟಿಸಿ ಬಸ್ ಮುಂಡಗೊಡದಿಂದ ಶಿರಸಿ ಕಡೆ ತೆರಳುವ ಸಂದರ್ಭದಲ್ಲಿ ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿ ಸಂಭವಿಸಿದೆ.

         ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಮುಂಡಗೋಡ ಪಿಎಸ್ಐ ಪರಶುರಾಮ ಮಿರ್ಚಗಿ ಅವರಿಗೆ ಕರೆ ಬಂದ ಕ್ಷಣವೆ ಸ್ಥಳಕ್ಕೆ ಧಾವಿಸಿ ಕೆಲ ಗಾಯಾಳುಗಳಿಗೆ ತಮ್ಮದೆ ವಾಹನದಲ್ಲಿ ತಾಲೂಕಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಾಗೆಯೇ ಇನ್ನುಳಿದ ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು.

Leave a Reply

Your email address will not be published. Required fields are marked *