ಕಾರವಾರ:ಹವಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಅಲೆಗಳ ರಭಸ ಹೆಚ್ಚಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹೌದು…ರಾಜ್ಯದ ಕರಾವಳಿ ತೀರಗಳಲ್ಲಿ ಮೇ 22 ರಿಂದ 25 ರವರೆಗೆ ಪ್ರತೀ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬಿಸಲಿದ್ದು,ಪ್ರತಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬಿಸುವ ಸಾಧ್ಯತೆ ಇರುವುದರಿಂದ ಅಲೆಗಳು ಉಲ್ಬಣಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು,ಆದ್ದರಿಂದ ಮೀನುಗಾರರ ಹಿತ ದೃಷ್ಟಿಯಿಂದ ಸಮುದ್ರಕ್ಕೆ ಇಳಿಯಬಾರದೆಂದು ಸರಕಾರ ಎಚ್ಚರಿಕೆ ನೀಡಿದೆ.

Leave a Reply