ಮುಂಡಗೋಡ : ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ಮುಂಡಗೋಡ ತಾಲೂಕಿನ ಅಂದಲಗಿ ಗ್ರಾಮದಲ್ಲಿ ನಡೆದಿದೆ.

ಹೌದು….ತಾಲೂಕಿನ ಕಲಕೇರಿ ಗ್ರಾಮದ ರಾಜು ಮುಕನಕಟ್ಟಿ (60) ಎನ್ನುವವರು ತಾಲೂಕಿನ ಅಂದಲಗಿ ಕೆರೆಯಲ್ಲಿ ಮೀನು ಹೀಡಿಯಲು ತೆರಳಿದ್ದ ವೇಳೆಯಲ್ಲಿ ವಿಪರೀತ ಮಳೆಯಿಂದ ಆಯತಪ್ಪಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಕೆರೆಯಲ್ಲಿ ಮೃತದೇಹ ತೇಲುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ತಾಲೂಕಾ ಆಸ್ಪತ್ರೆಗೆ ರವಾನಿಸಿದ್ದಾರೆ. ತಹಶೀಲ್ದಾರ ಶಂಕರ ಗೌಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿಲನೆ ನಡೆಸಿದರು.ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Leave a Reply