ಅಂಕೋಲಾ: ಹೆಸ್ಕಾಂ ಇಲಾಖೆಯ ನಿರ್ವಹಣೆಯ ಕುರಿತು ಗರಂ ಆದ ಶಾಸಕ ಸತೀಶ್ ಸೈಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಹೌದು… ಮಳೆಗಾಲ ಹತ್ತಿರ ಬರುತ್ತಿದ್ದಂತೆ ವಿದ್ಯುತ್ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವನ್ನು ವಹಿಸಲು ಹೆಸ್ಕಾಂ ಇಲಾಖೆ ನಿರ್ಲಕ್ಷ್ಯವಹಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ದೂರಿನ ಮೇರೆಗೆ ಹೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು.

ತಾಲೂಕಿನಲ್ಲಿ ಹಳೆಯ ವಿದ್ಯುತ್ ತಂತಿಗಳು ಹಾಗೂ ಜಂಗಲ್ ಕಟಿಂಗ್ ವಿಚಾರದಲ್ಲಿ ಶೂನ್ಯ ಸಾಧನೆ ಮಾಡಿರುವ ಅಧಿಕಾರಿಗಳ ವಿರುದ್ಧ ಹುಬ್ಬಳ್ಳಿ ವಿದ್ಯುತ್ ಸರಬರಾಜು ಎಂ ಡಿ ವೈಶಾಲಿಯವರಿಗೆ ಕರೆಮಾಡಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದ ಸೈಲ್ ಜಿಲ್ಲಾಧಿಕಾರಿ ಕಚೇರಿಗೆ ಬರುವಂತೆ ಹೇಳಿದ್ದಾರೆ.

ಶಾಸಕರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಗ್ಯಾಂಗ್ ಮೆನ್ ಗಳ ಕೊರತೆಯಿಂದ ಇಂತಹ ಸಮಸ್ಯೆ ಉಂಟಾಗಿದೆ ಎಂದು ಹೆಸ್ಕಾಂ ಅಧಿಕಾರಿ ರೊಶೀನಿ ಸಮಜಾಯಿಷಿ ನೀಡಿದ್ದು,ತಕ್ಷಣ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸುವಂತೆ ಸೈಲ್ ಸೂಚಿಸಿದ್ದಾರೆ.


Leave a Reply