ಅಂಕೋಲಾ: ಯುವ ಸಮುದಾಯಕ್ಕೆ ಉತ್ತೇಜನ ನೀಡುವುದರಿಂದ ಪಕ್ಷ ಉಜ್ವಲವಾಗಲಿದೆ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಹಳಿಯಾಳ ಕ್ಷೇತ್ರದ ಶಾಸಕ ಆರ್ ವಿ ದೇಶಪಾಂಡೆ ಹೇಳಿದರು.

ಅವರು ಅಂಕೋಲಾ ತಾಲೂಕಿನಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು ನಿಷ್ಠಾವಂತ ಕಾರ್ಯಕರ್ತರಿಂದ ಇಂದು ನಮ್ಮ ಸರಕಾರ ರಾಜ್ಯದಲ್ಲಿ ಆಳ್ವಿಕೆ ನಡೆಸುತ್ತಿದೆ. ಆದ್ದರಿಂದ ಕಾರ್ಯಕರ್ತರ ಬಗ್ಗೆ ಅತೀವ ಕಾಳಜಿಯನ್ನು ಎಲ್ಲಾ ಬಗೆಯ ಸೇಲ್ ಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ವಹಿಸಿಕೊಳ್ಳಬೇಕು, ರಾಜ್ಯದಲ್ಲಿ ಒಂದೆಡೆ ಪಕ್ಷ ಸಂಘಟನೆ ಮತ್ತೊಂದೆಡೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ನಮ್ಮ ಹೆಮ್ಮೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ರಾಜ್ಯ ಉತ್ತಮವಾಗಿ ಅಭಿವೃದ್ಧಿ ಪಥದತ್ತ ದಾಪುಗಾಲು ಇಡುತ್ತಿದೆ ಎಂದರು.

ನನಗೆ ಯಾರ ಬಗ್ಗೆಯೂ ದ್ವೇಷವಿಲ್ಲ ಆದ್ದರಿಂದ ನಾನು 9 ಬಾರಿ ಜನಪ್ರತಿನಿಧಿಯಾಗಿ ಆರಿಸಿಬಂದವನು.ಹಣ ಇದ್ದವರಷ್ಟೇ ರಾಜಕಾರಣ ಮಾಡಬೇಕು ಎನ್ನುವುದು ಮಾತು ಕಾಂಗ್ರೆಸ್ ಪಕ್ಷದಲ್ಲಿ ಸಲ್ಲದು.ಬದಲಾಗಿ ಸಾಮಾನ್ಯ ಕಾರ್ಯಕರ್ತನಿಗೂ ಎಲ್ಲಾ ರೀತಿಯ ಅಧಿಕಾರ ಸಿಗುತ್ತಿದೆ, ಮುಂದೆಯೂ ಸಿಗಲಿದೆ ಎಂದರು.


Leave a Reply