ಶಿರಸಿ:ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಮಾಧ್ಯಮ ಶ್ರೀ ಪ್ರಶಸ್ತಿಗೆ ವಿಶ್ವವಾಣಿ ಹಾಗೂ ದೂರದರ್ಶನ ವರದಿಗಾರ್ತಿ ವಿನುತಾ ಹೆಗಡೆ ಅವರನ್ನು ಆಯ್ಕೆಮಾಡಲಾಗಿದೆ.

ತಾಲೂಕಿನ ಪತ್ರಿಕಾ ಭವನದಲ್ಲಿ ತಾಲೂಕಾ ಅಧ್ಯಕ್ಷ ಸಂದೇಶ ಭಟ್ ಬೆಳಖಂಡ ನೇತೃತ್ವದಲ್ಲಿ ನಡೆದ ಕಾರ್ಯಕಾರಣಿ ಸಭೆಯಲ್ಲಿ ಈ ಕುರಿತು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.

ಯಲ್ಲಾಪುರ ತಾಲೂಕಿನ ಹಿಂದುಳಿದ ಗ್ರಾಮವಾದ ಭಾಗಿನಕಟ್ಟಾದಲ್ಲಿ 1979 ರಲ್ಲಿ ಜನಿಸಿದ ಇವರು 2006 ರಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿನುತಾ ಹೆಗಡೆ ಪ್ರಯಾಣ ಆರಂಭಿಸಿದ್ದಾರೆ.
ವಿವಾಹದ ನಂತರದಲ್ಲಿ ಧಾರವಾಡ ಜೆ ಎಸ್ ಎಸ್ ನಲ್ಲಿ ಬಿ.ಎ. ಹಾಗೂ ಪತ್ರಿಕೋದ್ಯಮದಲ್ಲಿ ಎಂ ಎ ಪದವಿಯನ್ನು ಪಡೆದಿದ್ದಾರೆ. ಅನೇಕಾರು ಪತ್ರಿಕೆಗಳಲ್ಲಿ ವರದಿಗಾರರಾಗಿ,ಉಪಸಂಪಾದಕರಾಗಿ ಸೇವೆ ಸಲ್ಲಿಸಿ,ಕೈಗಾ ಅಣುವಿದ್ಯುತ್ ಸ್ಥಾವರದಿಂದ ಸೂಸುವ ವಿಕಿರಣದಿಂದಾಗುವ ಕ್ಯಾನ್ಸರ್ ಕುರಿತ ಇವರ ಸರಣಿ ಲೇಖನ ದೇಶವ್ಯಾಪಿ ಸಂಚಲನ ಮೂಡಿಸಿತ್ತು.
2014 ರಿಂದ ಕನ್ನಡ ಪ್ರಭ ಉಪ ಸಂಪಾದಕಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ವಿಶ್ವವಾಣಿ ದಿನ ಪತ್ರಿಕೆಯಲ್ಲಿ ಹಿರಿಯ ಉಪಸಂಪಾದಕಿಯಾಗಿ ಐದು ವರ್ಷಗಳಕಾಲ ಕಾರ್ಯನಿರ್ವಹಿಸುತ್ತಿದ್ದಾರೆ.

ಇನ್ನು ದೃಶ್ಯ ಮಾದ್ಯಮ ಹಾಗೂ ಪ್ರಿಂಟ್ ಮಾದ್ಯಮದಲ್ಲಿ ಎರಡರಲ್ಲೂ ಕಾರ್ಯನಿರ್ವಹಿಸುವ ಇವರು ಬರೆದ ಕಥೆ ಕವನಗಳು ಸಾಕಷ್ಟು ಪತ್ರಿಕೆ ಹಾಗೂ ಆಕಾಶವಾಣಿಗಳಲ್ಲೂ ಪ್ರಸಾರವಾಗಿದೆ. ಇವರನ್ನು ಮುಂಬರುವ ಪತ್ರಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗೌರವಿಸಲಾಗುತ್ತದೆ ಎಂದು ತಾಲೂಕಾ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಕೆರೆಗದ್ದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply