Spread the love

ಕಾರವಾರ: ಭಟ್ಕಳ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಿ ಇಂದು ಸಚಿವ ಸಂಪುಟ ನಿರ್ಧರಿಸಿದೆ.

ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ ಸೆಕ್ಷನ್-3, 9, 349, 355, 356, 357, 359 ಮತ್ತು 361 ರನ್ವಯ ಶೆಡ್ಯೂಲ್-ಎ ರಲ್ಲಿ ಒಳಗೊಂಡ ಪ್ರದೇಶ ಹಾಗೂ ಶೆಡ್ಯೂಲ್-ಬಿ ರಲ್ಲಿ ಆ ಪ್ರದೇಶದ ಗಡಿರೇಖೆ ಗುರುತಿಸಲಾಗಿರುವಂತೆ ಉತ್ತರ ಕನ್ನಡ ಜಿಲ್ಲೆಯ ಹಾಲಿ ಭಟ್ಕಳ ಪುರಸಭೆಯ ವ್ಯಾಪ್ತಿಗೆ ಜಾಲಿ ಪಟ್ಟಣ ಪಂಚಾಯಿತಿ ಮತ್ತು ಹೆಬಳೆ ಗ್ರಾಮ ಪಂಚಾಯಿತಿಯನ್ನು ಸೇರ್ಪಡೆ ಮಾಡಿ ನಗರಸಭೆಯನ್ನಾಗಿ ಪರಿವರ್ತಿಸಿ ಭಟ್ಕಳ ನಗರಸಭೆ ಪ್ರದೇಶವೆಂದು ಉದ್ಘೋಷಿಸಲು; ಸಚಿವ ಸಂಪುಟ ನಿರ್ಣಯಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.

ಭಟ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಭಟ್ಕಳ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಪ್ರಸ್ತಾಪಿಸಿದ್ದರು. ಇದಕ್ಕೆ ಸಹಮತ ಸೂಚಿಸಿದ ಸಚಿವ ಸಂಪುಟ ಅಸ್ತು ಎಂದಿದೆ.

ಈ ಕುರಿತು ಸಂತೋಷವ್ಯಕ್ತಪಡಿಸಿದ ಸಚಿವ ಮಂಕಾಳು ವೈದ್ಯ ಭಟ್ಕಳ ನಗರಸಭೆಯಾಗಿ ಮಾಡಿದ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರಕ್ಕೆ ನಾನೆಂದು ಅಭಾರಿಯಾಗಿದ್ದೇನೆ,ಮುಂದಿನ ದಿನಗಳಲ್ಲಿ ಭಟ್ಕಳ ನಗರಸಭೆ ರಾಜ್ಯದಲ್ಲಿಯೇ ಮಾದರಿ ನಗರಸಭೆಯಾಗುವುದರಲ್ಲಿ ಯಾವುದೇ ಸಂಶಯಬೇಡ ಎಂದರು.

Leave a Reply

Your email address will not be published. Required fields are marked *