ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 52 ರ ರಾಮನಗುಳಿಯ ವಜ್ರಳ್ಳಿ ಬಳಿ ಕೆ ಎಸ್ ಆರ್ ಟಿ ಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಂದಕಕ್ಕೆ ಉರುಳಿ ಬಿದ್ದಿದ್ದು, ಬಸ್ಸಿನಲ್ಲಿದ್ದ 14 ಜನರಿಗೆ ಗಾಯಗಳಾಗಿದ್ದು,ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.

ಹೌದು… ರಾಷ್ಟ್ರೀಯ ಹೆದ್ದಾರಿ 52 ರಾಮನಗುಳಿ ಬಳಿಯ ವಜ್ರಳ್ಳಿ ಬಳಿ ರಾಯಚೂರಿನಿಂದ ಕಾರವಾರಕ್ಕೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸಿನ ಸ್ಟೇರಿಂಗ್ ಲಾಕ್ ಆಗಿ ಬಸ್ಸು ಹೆದ್ದಾರಿ ಬದಿಯ ಕಂದಕಕ್ಕೆ ಉರುಳಿದ್ದು,ಬಸ್ಸಿನಲ್ಲಿದ್ದ 37 ಪ್ರಯಾಣಿಕರ ಪೈಕಿ 14 ಪ್ರಯಾಣಿಕರಿಗೆ ಗಾಯಗಳಾಗಿದ್ದು,ಗಾಯಾಳುಗಳನ್ನು ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ತಕ್ಷಣ ಧಾವಿಸಿದ ಹೆದ್ದಾರಿ ಗಸ್ತು ವಾಹನ ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ರಕ್ಷಿಸಿ ಆಂಬ್ಯುಲೆನ್ಸ್ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲು ನೆರವಾದರು..ಈ ಅಪಘಾತದ ಕುರಿತು ಅಂಕೋಲಾ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುಣಮಟ್ಟ ಕಳೆದುಕೊಂಡ ಕೆ ಎಸ್ ಆರ್ ಟಿ ಸಿ ಬಸ್ಸುಗಳು! ಪ್ರಯಾಣಿಕರಿಗೆ ಆತಂಕ!
ಸರಕಾರದ ಪಂಚಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯು ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಬಾಗ್ಯ ಕಲ್ಪಿಸಿದ್ದು,ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಯಾಣಿಸಿ ಅದರ ಉಪಯೋಗವನ್ನು ಪಡೆಯುತ್ತಿದ್ದಾರೆ.ಆದರೆ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿ ಶಕ್ತಿ ನೀಡಿದ್ದ ಸರಕಾರ,ಬಸ್ಸುಗಳಿಗೆ ಶಕ್ತಿ ತುಂಬಲು ವಿಫಲವಾಗಿರುವ ಹಿನ್ನಲೆಯಲ್ಲಿ ಹೆಚ್ಚಿನ ಬಸ್ಸುಗಳು ರಸ್ತೆ ಮಧ್ಯದಲ್ಲೇ ತಾಂತ್ರಿಕ ದೋಷದಿಂದ ಕೆಟ್ಟು ನಿಲ್ಲುತ್ತಿದೆ. ಅದಕ್ಕೆ ಪೂರಕವೆಂಬಂತೆ ಇಂದು ಅಂಕೋಲಾ ತಾಲೂಕಿನಲ್ಲಿ ನಡೆದ ಅಪಘಾತವು ಒಂದು 37 ಮಂದಿ ಪ್ರಯಾಣಿಕರನ್ನು ಹೊತ್ತು ಬರುತ್ತಿದ್ದ ಬಸ್ಸಿನ ಸ್ಟೇರಿಂಗ್ ಲಾಕ್ ಆದ ಕಾರಣ ಕಂದಕಕ್ಕೆ ಉರುಳಿ ಹಲವಾರು ಮಂದಿ ಗಾಯಗೊಳ್ಳುವಂತಾಗಿದೆ.

ಮುಂದಿನ ದಿನಗಳಲ್ಲಿ ಸರಕಾರ ಈ ಕುರಿತು ಎಚ್ಚೆತ್ತುಕೊಂಡು ಬಸ್ಸುಗಳ ಗುಣಮಟ್ಟವನ್ನು ಪರೀಕ್ಷಿಸಿ ಪ್ರಾಯಾಣಕ್ಕೆ ಯೋಗ್ಯವಾದ ರೀತಿಯಲ್ಲಿ ಬಸ್ಸುಗಳನ್ನು ಸಿದ್ಧಪಡಿಸಬೇಕಾಗಿದೆ ಎನ್ನುವುದು ಪ್ರಾಯಾಣಿಕರ ಕೂಗಾಗಿದೆ.


