ಅಂಕೋಲಾ : ಪಟ್ಟಣದ ಜೈಹಿಂದ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ತಾಲೂಕಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವೈಯಕ್ತಿಕ ವಿಭಾಗದಲ್ಲಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಮಯೂರ ವಿನೋದ ನಾಯ್ಕ ಪ್ರಥಮ ಬಹುಮಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ವಿಜ್ಞಾನ ಶಿಕ್ಷಕರಾದ ಸುಧೀರ ನಾಯಕ ಅವರ ಮಾರ್ಗದರ್ಶನದಲ್ಲಿ ಸಿದ್ದಪಡಿಸದ ಮಾದರಿ ಎಲ್ಲರ ಮಚ್ಚುಗೆ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು, ಆಯ್ಕೆಯಾದ ವಿದ್ಯಾರ್ಥಿ ಮಯೂರ್ ನಾಯ್ಕ ಹಾಗೂ ಮಾರ್ಗದರ್ಶನ ಮಾಡಿದ ಶಿಕ್ಷಕ ಸುಧೀರ ನಾಯಕರನ್ನು ಎಸ್ ಡಿ ಎಮ್ ಸಿ ಅಧ್ಯಕ್ಷ ದಿನೇಶ ನಾಯ್ಕ ಸದಸ್ಯರು, ಪಾಲಕ-ಪೋಷಕರು ,ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.


