BREAKING ಶಿರಸಿ,ಕುಮಟಾ ಸೇರಿದಂತೆ 19 ಮಂದಿ ‘ತಹಶೀಲ್ದಾರ್’ ವರ್ಗಾವಣೆ ಮಾಡಿ ಸರಕಾರ ಆದೇಶ.

Spread the love

ಕಾರವಾರ:  ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ,ಶಿರಸಿ ಸೇರಿದಂತೆ ರಾಜ್ಯದ 19 ತಹಶೀಲ್ದಾರ್ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು ಯಾರ್ಯಾರು ಯಾವ ಯಾವ ಕ್ಷೇತ್ರಕ್ಕೆ ವರ್ಗಾವಣೆಯಾಗಿದ್ದಾರೆ ಎನ್ನುವುದು ಈ ಕೆಳಗೆ ತಿಳಿಯಿರಿ.

ಹೌದು…ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಶಿರಸಿಯ ಸಹಾಯಕ ಆಯುಕ್ತರ ಕಚೇರಿಯ ಗ್ರೇಡ್-2 ತಹಶೀಲ್ದಾರ್ ಕೃಷ್ಣಾ ಕಾಮಕರ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿಗೆ ವರ್ಗಾವಣೆ ಮಾಡಿದ್ದಾರೆ. ಹಾಸನದ ಭೂಸ್ವಾಧೀನಾಧಿಕಾರಿಗಳ ಕಚೇರಿಯ ಗ್ರೇಡ್-1 ತಹಶೀಲ್ದಾರ್ ಗೋವಿಂದರಾಜು ಬಿಎಂ ಅವರನ್ನು ಚಿತ್ರದುರ್ಗ ತಾಲ್ಲೂಕಿಗೆ ವರ್ಗಾವಣೆ ಮಾಡಲಾಗಿದೆ.

ದಕ್ಷಿಣ ಕನ್ನಡದ ಮುಲ್ಕಿ ತಾಲ್ಲೂಕು ಗ್ರೇಡ್-1 ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಅವರನ್ನು ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿಗೆ ವರ್ಗಾವಣೆ ಮಾಡಿದ್ದಾರೆ.

ಯಾದಗಿರಿಯ ಜಿಲ್ಲಾಧಿಕಾರಿಗಳ ಕಚೇರಿಯ ಗ್ರೇಡ್-1 ತಹಶೀಲ್ದಾರ್ ದುಂಡಪ್ಪ ಕೋಮಾರ ಅವರನ್ನು ಬೆಳಗಾವಿಯ ಖಾನಾಪುರ ತಾಲ್ಲೂಕಿಗೆ, ಶಿರಸಿ ತಾಲ್ಲೂಕು ಗ್ರೇಡ್-1 ತಹಶೀಲ್ದಾರ್ ಶ್ರೀಧರ ಮುಂದಲಮನಿ ಅವರನ್ನು ದಕ್ಷಿಣ ಕನ್ನಡದ ಮೂಡಬಿದಿರೆ ತಾಲ್ಲೂಕಿಗೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

Leave a Reply

Your email address will not be published. Required fields are marked *