ಹೊನ್ನಾವರ:ಟೊಂಕಾ ವಾಣಿಜ್ಯ ಬಂದರು ವಿರೋಧಿಸಿ ಪ್ರತಿಭಟನೆನಿರತ ಐವತ್ತುಕ್ಕೂ ಅಧಿಕ ಮೀನುಗಾರರನ್ನು ಪೊಲೀಸರು ಬಂಧಿಸಿದ್ದು, ಪೊಲೀಸರ ವಿರುದ್ಧ ಸ್ಥಳೀಯ ಮೀನುಗಾರರು ಆಕ್ರೋಶ ವ್ಯಕ್ತಪಡಿಸಿ ಎಚ್ಚರಿಕೆ ನೀಡಿದ್ದಾರೆ.

ಹೌದು… ಟೊಂಕಾ ವಾಣಿಜ್ಯ ಬಂದರು ಕಾಮಗಾರಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಐವತ್ತಕ್ಕೂ ಅಧಿಕ ಜನರನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದು ಇದರಿಂದ ಆಕ್ರೋಶಗೊಂಡ ಸ್ಥಳೀಯ ಮೀನುಗಾರರು ಪೊಲೀಸರು ಮತ್ತು ಮೀನುಗಾರಿಕೆ ಸಚಿವ ಮಂಕಾಳು ವೈದ್ಯರ ಮೇಲೆ ಆಕ್ರೋಶವ್ಯಕ್ತಪಡಿಸಿದ್ದಾರೆ ಸಾಯಂಕಾಲ ನಾಲ್ಕು ಗಂಟೆ ಒಳಗೆ ವಶಕ್ಕೆ ಪಡೆದ ಮೀನುಗಾರರನ್ನು ಬಿಡುಗಡೆಗೊಳಿಸದಿದ್ದಲ್ಲಿ ಸಮುದ್ರಕ್ಕೆ ಹಾರಿ ಪ್ರಾಣ ಬಿಡುದಾಗಿ ಎಚ್ಚರಿಕೆ ನೀಡಿದ್ದಾರೆ.

ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-66 ಪಕ್ಕದಲ್ಲೇ ಇರುವ ಹಿರೇಮಠ ಸ್ಮಶಾನದಿಂದ ಕಾಸರಕೋಡ ಗ್ರಾಮದಲ್ಲಿ ಸಮುದ್ರಗುಂಟ ಇರುವ ರಸ್ತೆಯನ್ನು ಅಭಿವೃದ್ಧಿಪಡಿಸಿ ಬಂದರು ಅಭಿವೃದ್ಧಿ ಯೋಜನಾ ಸ್ಥಳದವರೆಗೆ ಹೋಗುವ ರಸ್ತೆ ಕಾಮಗಾರಿಯ ಸರ್ವೆ ಕಾರ್ಯ ನಡೆಯುವ ಸುತ್ತಲಿನ ಪ್ರದೇಶದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163 ರನ್ವಯ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163 ರನ್ವಯ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಆದೇಶಿಸಿದ್ದರು ಅದರ ಹೊರತಾಗಿಯೂ ಬಂದರು ವಿರೋಧಿಸಿ ಸ್ಥಳೀಯ ಮೀನುಗಾರರು ಪ್ರತಿಭಟನೆ ಹಮ್ಮಿಕೊಂಡಿದ್ದರಿಂದ ಬಂಧಿಸಲಾಗಿದೆ ಎನ್ನಲಾಗಿದೆ.

ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆ ನಿರತರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದು,ಈ ಸಂದರ್ಭದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು,ಪೊಲೀಸರು,ಸ್ಥಳೀಯರು ಮದ್ಯೆ ಕೆಲಕಾಲ ಮಾತಿನ ಚಕಮಕಿ ಉಂಟಾಗಿತ್ತು.ಇದರಿಂದ ಆಕ್ರೋಶಗೊಂಡ ಸ್ಥಳೀಯ ಮೀನುಗಾರರು ಪೊಲೀಸರು ಹಾಗೂ ಸಚಿವರಿಗೆ ಸಾಯಂಕಾಲ 4 ಗಂಟೆಯ ಒಳಗೆ ಬಂಧಿಸಿದ್ದವರನ್ನು ಬಿಡುಗಡೆ ಮಾಡದಿದ್ದಲ್ಲಿ ಸಮುದ್ರಕ್ಕೆ ಹಾರಿ ಪ್ರಾಣ ಬಿಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.


Leave a Reply