ಕಾರವಾರ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಮಾರ್ಚ್ 9 ರಂದು ಬೆಳಿಗ್ಗೆ 6 ಗಂಟೆಗೆ ಕಾರವಾರ ರವೀಂದ್ರನಾಥ ಟಾಗೋರ ಕಡಲ ತೀರದಿಂದ ಮಾದಕ ದ್ರವ್ಯ ಹಾಗೂ ಸೈಬರ್ ಅಪರಾಧ ಮುಕ್ತ ಕರ್ನಾಟಕ( Drugs & Cyber Crime free Karnataka & Fitness for All)ಥೀಮ್ ಅಡಿಯಲ್ಲಿ ಕರ್ನಾಟಕ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟವನ್ನು ಆಯೋಜಿಸಲಾಗಿದೆ ಎಂದು ಎಸ್ಪಿ ಎಂ ನಾರಾಯಾಣ (Sp M Narayan IPS) ಹೇಳಿದರು.

ಅವರು ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಪೊಲೀಸ್ ರನ್ -2025 ರ ಮ್ಯಾರಾಥಾನ್ 5K ಓಟದಲ್ಲಿ ಸಾರ್ವಜನಿಕರು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಹೆಸರುಗಳನ್ನು ನೊಂದಾಯಿಸಿ ಹಾಗೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮ್ಯಾರಾಥಾನ್ ಓಟದಲ್ಲಿ ಭಾಗವಹಿಸಲು ಕರೆ ನೀಡಿದರು.

5K ಮ್ಯಾರಾಥಾನ್ ಓಟದಲ್ಲಿ ಮೊದಲ 3 ಓಟಗಾರರಿಗೆ ಆಕರ್ಷಕ ನಗದು ಬಹುಮಾನ, ಪದಕ ಹಾಗೂ ಪ್ರಶಸ್ತಿ ಪತ್ರವನ್ನು ಮತ್ತು ಮ್ಯಾರಾಥಾನ್ ಮುಗಿಸಿದ ಎಲ್ಲರಿಗೂ ಪ್ರಶಸ್ತಿ ಪತ್ರವನ್ನು ಹಾಗೂ ಪದಕವನ್ನು ನೀಡಲಾಗುವುದು ಎಂದು ಪೊಲೀಸ್ ಅಧೀಕ್ಷಕ ಎಂ ನಾರಾಯಣ ತಿಳಿಸಿದ್ದಾರೆ.

ಸಾಮಾಜಿಕ ಕಳಕಳಿ ಹೊಂದಿರುವ ಪೊಲೀಸ್ ರನ್ -2025 ರ ಮ್ಯಾರಾಥಾನ್ 5K ಓಟದಂತಹ ಕಾರ್ಯಕ್ರಮಗಳಲ್ಲಿ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮನ್ನು, ತಾವು ತೊಡಗಿಸಿಕೊಳ್ಳಬೇಕು,ಪೊಲೀಸ್ ಇಲಾಖೆ ಸಾರ್ವಜನಿಕರೊಂದಿಗೆ ಬೆರೆತು ಹೆಚ್ಚಿನ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಇಂತಹ ಕಾರ್ಯಕ್ರಮಗಳನ್ನು ಸರಕಾರ ರೂಪಿಸುತ್ತಿದೆ.ಬನ್ನಿ ನಮ್ಮೊಂದಿಗೆ ಕೈಜೋಡಿಸಿ ಉತ್ತರ ಕನ್ನಡ ಜಿಲ್ಲೆಯನ್ನು ಮಾದಕ ದ್ರವ್ಯ ಹಾಗೂ ಸೈಬರ್ ಕ್ರೈಂ ಮುಕ್ತಮಾಡೋಣ- ಎಂ ನಾರಾಯಣ ಐಪಿಎಸ್,ಪೊಲೀಸ್ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ


Leave a Reply