ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನ್ಯಾಯಾಲಯದ ಆದೇಶಕ್ಕೆ ಕಿಮ್ಮತ್ತು ಕೊಡದ ಪೊಲೀಸ ಅಧಿಕಾರಿಗಳ ವಿರುದ್ಧ ಬ್ರಹ್ಮರ್ಷಿ ನಾರಾಯಣ ಗುರು ಶಕ್ತಿ ಪೀಠದ ಪೀಠಾಧಿಪತಿಗಳಾದ ಹಾಗೂ ಈಡಿಗ ಸಮುದಾಯದ ಸ್ವಾಮೀಜಿ ಪ್ರಣವಾನಂದ ಸ್ವಾಮೀಜಿಯವರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಅಂಕೋಲಾ ಪೊಲೀಸರು ಐ ಆರ್ ಬಿ ಕಂಪನಿಯ ಎಂಟು ಅಧಿಕಾರಿಗಳ ಮೇಲೆ ಎಫ್ ಐ ಆರ್ ದಾಖಲು ಮಾಡಿದ್ದಾರೆ.

ಹೌದು….ಶಿರೂರು ಗುಡ್ಡ ಕುಸಿತಕ್ಕೆ ಐ ಆರ್ ಬಿ ಕಂಪನಿಯ ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಕಾರಣ ಎಂದು ಬ್ರಹ್ಮರ್ಷಿ ನಾರಾಯಣ ಗುರು ಶಕ್ತಿ ಪೀಠದ ಪೀಠಾಧಿಪತಿಗಳಾದ ಹಾಗೂ ಈಡಿಗ ಸಮುದಾಯದ ಸ್ವಾಮೀಜಿ ಪ್ರಣವಾನಂದ ಸ್ವಾಮೀಜಿಯವರು ವಿರೋಧ ವ್ಯಕ್ತಪಡಿಸಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು, ಪೊಲೀಸರು ಪ್ರಕರಣ ದಾಖಲಿಸದ ಕಾರಣ ಸ್ವಾಮೀಜಿ ನ್ಯಾಯಾಲಯದ ಮೊರೆ ಹೋಗಿದ್ದರು, ಸ್ವಾಮೀಜಿಯವರ ದೂರನ್ನು ಪುರಸ್ಕರಿಸಿದ ಜೆ ಎಂ ಎಫ್ ಸಿ ನ್ಯಾಯಾಲಯ ಕಂಪನಿಯ ಎಂಟು ಜನರ ಮೇಲೆ ಎಫ್ ಐ ಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಿತ್ತು ಆದರೂ ನ್ಯಾಯಾಲಯದ ಆದೇಶಕ್ಕೆ ಕಿಮ್ಮತ್ತು ಕೊಡದ ಪೊಲೀಸ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದು,ಪ್ರತಿಭಟನೆಗೆ ಸಂದ ಜಯ ಎಂದು ಸ್ವಾಮೀಜಿ ಹೇಳಿದ್ದಾರೆ.


Leave a Reply