ಅಂಕೋಲಾ: ವಿಕಲಚೇತನರ ಶ್ರೇಯೋಭಿವೃದ್ಧಿಗೆ ನಮ್ಮ ಸರಕಾರ ಎಂದೆಂದಿಗೂ ಸಿದ್ಧ ಎಂದು ಅಂಕೋಲಾ ಕಾರವಾರ ಕ್ಷೇತ್ರದ ಶಾಸಕ ಸತೀಶ್ ಸೈಲ್ ಹೇಳಿದರು.

ಹೌದು… ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಕಾರವಾರ,ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ತಾಲೂಕು ಪಂಚಾಯತ ಅಂಕೋಲಾ ಹಾಗೂ ಶಿಶು ಅಭಿವೃದ್ಧಿ ಯೋಜನೆ ಅಂಕೋಲಾ ಇವರ ಸಂಯೋಗದಲ್ಲಿ ವಿಕಲಚೇತನರ 5% ಅನುದಾನದಲ್ಲಿ ವಿಕಲಚೇತನರಿಗೆ ಯಂತ್ರಚಾಲಿತ ವಾಹನ ವಿತರಣಾ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ವಾಹನವನ್ನು ಹಸ್ತಾಂತರಿಸಿ ಮಾತನಾಡಿ ವಿಕಲಚೇತನರ ಕುಂದುಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಮ್ಮ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ.

ಮುಂದಿನ ದಿನಗಳಲ್ಲಿ ಅವರೊಂದಿಗೆ ಸಮಾಲೋಚನೆ ನಡೆಸಿ ಅವರ ವೈಯಕ್ತಿಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇವೆ ಹಾಗೆಯೇ ವಿಕಲಚೇತನರಿಗೆ ತಾಲೂಕಿನಲ್ಲಿ ಸಭಾಭವನವನ್ನು ನಿರ್ಮಿಸಿಕೊಡುತ್ತೇವೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ 9.99 ಲಕ್ಷ ರೂಪಾಯಿ ಅನುದಾನದಲ್ಲಿ ವಿಕಲಚೇತನರಿಗೆ ಯಂತ್ರ ಚಾಲಿತ 8 ವಾಹನಗಳನ್ನು ಹಸ್ತಾಂತರಿಸಿದರು.

ವಿಕಲಚೇತನ ಸಂಘದ ತಾಲೂಕಾಧ್ಯಕ್ಷ ವಿಜಯ ನಾಯ್ಕ ಮಾತನಾಡಿ ನಮ್ಮ ಶಾಸಕರಾದ ಸತೀಶ್ ಸೈಲ್ ಅವರು ಈ ಹಿಂದಿನಿಂದಲೂ ನಮ್ಮ ನೋವುಗಳಿಗೆ ಸ್ಪಂದಿಸುತ್ತಿದ್ದು, ಮುಂದಿನ ದಿನಗಳಲ್ಲಿ ಅವರು ನಮ್ಮ ವೈಯಕ್ತಿಕ ಸಂಕಷ್ಟಗಳನ್ನು ಪರಿಹರಿಸಿ,ನಮಗೆ ಸಭಾಭವನವನ್ನು ನಿರ್ಮಿಸಿಕೊಡುವ ಭರವಸೆಯನ್ನು ನೀಡಿದ್ದಾರೆ.ಮುಂಬರುವ ದಿನಗಳಲ್ಲಿ ವಿಕಲಚೇತನರ ಜಿಲ್ಲಾ ಸಮ್ಮೇಳನನವನ್ನು ನಡೆಸುತ್ತೇವೆ ಅಂದು ಅವರನ್ನು ಗೌರವಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಾಯಿ ಗಾಂವ್ಕರ್, ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಜಾತಾ ಗಾಂವ್ಕರ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಶ್ವರ ನಾಯಕ,ಗ್ಯಾರಂಟಿ ಪ್ರಾಧಿಕಾರದ ತಾಲೂಕಾಧ್ಯಕ್ಷ ಪಾಂಡುರಂಗ ಗೌಡ,ಮಾಜಿ ಶಾಸಕ ಕೆ ಎಚ್ ಗೌಡ,ತಾಲೂಕಾ ದಂಡಾಧಿಕಾರಿ ಚಿಕ್ಕಪ್ಪ ನಾಯಕ,ತಾಪಂ ಕಾರ್ಯನಿರ್ವಹಣಾಧಿಕಾರಿ ರಾಮು ಗುನಗಿ,ಸಿಡಿಪಿಓ ರಾಘವೇಂದ್ರ ಭಟ್ಟ, ಕೆಪಿಸಿಸಿ ವಕ್ತಾರ ಶಂಭು ಶೆಟ್ಟಿ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖರು,ಕಾರ್ಯಕರ್ತರು ಉಪಸ್ಥಿತರಿದ್ದರು.


