Spread the love

ಕಾರವಾರ:ಕೆಪಿಸಿಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಇವರ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆಯನ್ನು ಕಾರವಾರ ಅಂಕೋಲಾ ಶಾಸಕ ಸತೀಶ ಸೈಲ್ ತೀವ್ರವಾಗಿ ಖಂಡಿಸಿದ್ದಾರೆ.

ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಾನು ಬೆಂಗಳೂರಿನಲ್ಲಿದ್ದು,ಘಟನೆಯ ಸಂಪೂರ್ಣ ವಿವರಗಳನ್ನು ಪಡೆದಿದ್ದೇನೆ, ಮಾರಣಾಂತಿಕ ಹಲ್ಲೆಯಂತಹ ಹೇಯ ಕೃತ್ಯವನ್ನು ನಾನು ಎಂದಿಗೂ ಸಹಿಸಲಾರೆ ಅದೇ ರೀತಿಯಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಇವರ ಮೇಲಾದ ಮಾರಣಾಂತಿಕ ಹಲ್ಲೆಯ ಸುದ್ದಿ ತಿಳಿದ ತಕ್ಷಣ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿ ಕೂಡಲೇ ಅಪರಾಧಿಗಳನ್ನು ಬಂಧಿಸುವ ಕೆಲಸ ಮಾಡಬೇಕೆಂದು ಸೂಚಿಸಿದ್ದೇನೆ.

ಇದು ಮಾತ್ರವಲ್ಲದೆ ಇದರ ಹಿಂದೆ ಯಾರೇ ಇರಲಿ ಮತ್ತು ಈ ಷಡ್ಯಂತ್ರವನ್ನು ಕೂಡ ತಕ್ಷಣ ಬಯಲು ಮಾಡಿ ಸಾರ್ವಜನಿಕ ವಲಯದಲ್ಲಿ ಉಂಟಾದ ಭಯದ ವಾತಾವರಣವನ್ನು ತಿಳಿಯಾಗಿಸಬೇಕೆಂದು ಒತ್ತಾಯಿಸಿದ್ದೇನೆ, ನನ್ನ ಕ್ಷೇತ್ರದಲ್ಲಿ ಈ ರೀತಿಯ ಕುಕೃತ್ಯ ನಡೆಸಿ ಶಾಂತಿ ಕದಡುವುದನ್ನು ನಾನು ಎಂದಿಗೂ ಸಹಿಸುವುದಿಲ್ಲ ಎಂದು ಶಾಸಕ ಸತೀಶ ಕೆ ಸೈಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *