Chakravarti Sulibele: ವಿವಾದಕ್ಕೆ ಕಾರಣವಾದ ಚಕ್ರವರ್ತಿ ಸೂಲಿಬೆಲೆ ಹೇಳಿಕೆ! ಎಫ್‌ಐಆರ್ ದಾಖಲು

Spread the love

ಮಂಗಳೂರು:  ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗುವಂತೆ ಹೇಳಿಕೆ ನೀಡಿದ್ದ ಚಕ್ರವರ್ತಿ ಸೂಲಿಬೆಲೆಯವರ ಈ ಹೇಳಿಕೆ ವಿವಾದ ಸೃಷ್ಟಿಸಿದ್ದು, ಕಾಂಗ್ರೆಸ್ ಮುಖಂಡ ರಶೀದ್ ಅವರು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದು ಎಫ್ ಐ ಆರ್ ದಾಖಲಾಗಿದೆ.

ಹೌದು…ಮಾರ್ಚ್ 9 ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ನಡೆದ ಪಾದಯಾತ್ರೆಯ ಸಮಾರೋಪದಲ್ಲಿ ಭಾಗವಹಿಸಿದ್ದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ  ಅವರು ಪ್ರಚೋದನಕಾರಿ ಹೇಳಿಕೆ ನೀಡಿ ಕೋಮು ದ್ವೇಷಕ್ಕೆ ಕಾರಣರಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸೂಲಿಬೆಲೆ ಅವರ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಏನಿದು ಪ್ರಕರಣ?

ವಿಶ್ವ ಹಿಂದೂ ಪರಿಷತ್ ನಡೆಸಿದ ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆಯ ಸಮಾರೋಪದಲ್ಲಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅವರು ಮಾಡಿದ ಭಾಷಣ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. “ಎಲ್ಲಿಯವರೆಗೆ ಲವ್ ಜಿಹಾದ್ ಬಗ್ಗೆ ಮಾತನಾಡುತ್ತಿರುತ್ತೇವೆ? ಸ್ವಲ್ಪ ಬದಲಾವಣೆ ತರೋಣ. ನಮ್ಮ ಗಂಡು ಮಕ್ಕಳಿಗೂ ಈ ಬಗ್ಗೆ ಹೇಳಬೇಕು. ಎಷ್ಟು ದಿನ ನಮ್ಮ ಹೆಣ್ಣುಮಕ್ಕಳನ್ನು ನೋಡುತ್ತಿರುತ್ತಾರೆ? ಹುಡುಗಿ ಸಿಗಲಿಲ್ಲ ಹುಡುಗಿ ಸಿಗಲಿಲ್ಲ ಅಂತ ಎಷ್ಟು ದಿನ ಹೇಳುತ್ತಿರುತ್ತಾರೆ? ಸ್ವಲ್ಪ ಬೇರೆಯವರನ್ನು ನೋಡಲಿ ಅಲ್ವಾ? ನಮ್ಮ ಸಮಾಜದಲ್ಲಿ ನಾವು ನಮ್ಮ ಗಂಡು ಮಕ್ಕಳಿಗೆ ಹೆಣ್ಣು ಸಿಕ್ಕಿಲ್ಲವೆಂದು ಆಲೋಚನೆ ಮಾಡುತ್ತಿರುವಾಗ ಪಕ್ಕದ ಸಮಾಜದಲ್ಲೂ ಸಮಸ್ಯೆಗಳು ಇದೆ ಅಲ್ವಾ, ಧೈರ್ಯ ತುಂಬಿ ಅಲ್ವಾ? ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಅವರು ಹಿಂದೂ ಯುವಕರಿಗೆ ಕರೆ ಕೊಟ್ಟಿದ್ದರು.

ಲ್ಆರಂಭದಲ್ಲಿ ನಮ್ಮ (ಹಿಂದೂ) ಹೆಣ್ಣುಮಕ್ಕಳನ್ನು ಲವ್ ಜಿಹಾದ್ ಮೂಲಕ ಮದುವೆಯಾಗುತ್ತಿದ್ದರು. ಮತಾಂತರ ಮಾಡುತ್ತಿದ್ದರು. ಈಗ ಹಿಂದೂ ಯುವತಿಯರು ಎಚ್ಚೆತ್ತುಕೊಂಡಿದ್ದಾರೆ. ಹಾಗಾಗಿ, ಹೆಸರನ್ನೇ ಬದಲಾಯಿಸಿ ಹಿಂದೂ ಹೆಸರು ಇಟ್ಟುಕೊಂಡು ಪ್ರೀತಿಯ ನಾಟಕವಾಡಿ ಮತಾಂತರ ಮಾಡುತ್ತಿದ್ದಾರೆ ಎಂದು ಸೂಲಿಬೆಲೆ ಆರೋಪಿಸಿದರು.ಅನೇಕ ರಾಜ್ಯಗಳಲ್ಲಿ ಮುಸ್ಲಿಂ ಯುವಕರು ಹಿಂದೂ ಹೆಣ್ಣುಮಕ್ಕಳನ್ನು ಓಲೈಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ, ಆ ಕೃತ್ಯವನ್ನು ವಿಡಿಯೋ ಮಾಡಿ ಇಟ್ಟುಕೊಂಡು ಹೆದರಿಸಿ ಮತಾಂತರ ಮಾಡುವ ಕೃತ್ಯಗಳೂ ನಡೆಯುತ್ತಿವೆ ಎಂದು ಸೂಲಿಬೆಲೆ ಆರೋಪಿಸಿದರು.

Leave a Reply

Your email address will not be published. Required fields are marked *